ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸ್ವಾಗತ

ಯುವ ಜನ ಚಟುವಟಿಕೆಗಳನ್ನು ಎಲ್ಲಾ ಆಯಾಮಗಳಲ್ಲಿ ಉತ್ತೇಜಿಸುವ  ಉದ್ದೇಶದಿಂದ 1969-70ರಲ್ಲಿ ಯುವಜನ ಸೇವಾ ಇಲಾಖೆಯ ಹೆಸರಿನಲ್ಲಿ ಪ್ರತ್ಯೇಕ ಇಲಾಖೆಯಾಗಿ ಅಸ್ತಿತ್ವಕ್ಕೆ ಬಂದಿತು.   2012-13ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಯುವ ನೀತಿಯ ಶಿಫಾರಸ್ಸಿನ ಅನುಸಾರ ಇಲಾಖೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎಂದು ಪುನರ್ ನಾಮಕರಣ ಮಾಡಲಾಗಿದೆ.

 1. ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯ:

       ದೇಶದಲ್ಲಿ ಯುವ ಸಬಲೀಕರಣ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯೋನ್ಮುಖವಾಗಿರುವ ರಾಜ್ಯಗಳಲ್ಲಿ ಕರ್ನಾಟಕವೂ ಸಹ ಒಂದಾಗಿರುತ್ತದೆ.  ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕ್ರೀಡಾ ಸಂಸ್ಥೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಮುಖಾಂತರ ನಗರ ಮತ್ತು ಗ್ರಾಮಾಂತರ ಪ್ರದೇಶದ ಯುವಜನರು ಮತ್ತು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳಲ್ಲದ ಯುವಜನರ ಸಾಮಾಜಿಕ, ಆರ್ಥಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಅಗತ್ಯವಾದ ಅವಶ್ಯಕತೆಗಳನ್ನು ಒದಗಿಸುವಲ್ಲಿ ಕಾರ್ಯೋನ್ಮುಖವಾಗಿದೆ.

     ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನರ ಏಳಿಗೆಗಾಗಿ ಸೂಕ್ತ ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವತಃ ಅನುಷ್ಠಾನಗೊಳಿಸುತ್ತಿರುವುದಲ್ಲದೆ, ಕೆಳಕಂಡ ಸಂಸ್ಥೆಗಳ ಮೂಲಕ ಯುವಜನರಿಗೆ ಮತ್ತು ಯುವಜನ ಸಂಸ್ಥೆಗಳಿಗೆ ಅಗತ್ಯ ಮಾರ್ಗದರ್ಶನ ನೀಡುತ್ತಿದೆ.

 • ಕರ್ನಾಟಕ ಕ್ರೀಡಾ ಪ್ರಾಧಿಕಾರ
 • ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ
 1. ಸರ್ಕಾರಿ ವೈಮಾನಿಕ ತರಬೇತಿ ಶಾಲೆ

     ಸರ್ಕಾರಿ ವೈಮಾನಿಕ ತರಬೇತಿ ಶಾಲೆಯು 60 ವರ್ಷಕ್ಕೂ ಮೇಲ್ಪಟ್ಟ ಒಂದು ಪಾರಂಪರಿಕ ಹಿನ್ನೆಲೆಯುಳ್ಳ ಅಪರೂಪದ ಸಂಸ್ಥೆಯಾಗಿದೆ. ಅಂದಿನ ಪ್ರಧಾನಮಂತ್ರಿಯಾಗಿದ್ದ ಪಂಡಿತ್ ಜವಹರಲಾಲ್ ನೆಹರೂರವರು ಉದ್ಘಾಟನೆ ಮಾಡಿರುತ್ತಾರೆ, ಇದು ರಾಷ್ಟ್ರ ಮಟ್ಟದಲ್ಲಿ ಒಂದು ಹೆಮ್ಮೆಯ  ಪ್ರತೀಕವಾಗಿದೆ.  ಸರ್ಕಾರವು ಈ ಶಾಲೆಯ ಎಲ್ಲಾ ಚಟುವಟಿಕೆಗಳಿಗಾಗಿ ಎಲ್ಲಾ ಹಂತಗಳಲ್ಲಿಯೂ ಸಂಪೂರ್ಣ ರೀತಿಯಲ್ಲಿ ಸಹಕಾರ ನೀಡುತ್ತಿದೆ.  ಶಾಲೆಯ ಹಾರಾಟದ ಅನುಮೋದನೆಯನ್ನು ದಿನಾಂಕ: 01.01.2016  ರಿಂದ  31.12.2020ರ ವರೆಗೆ ನವೀಕರಿಸಲಾಗಿರುತ್ತದೆ.

     ಸಂಸ್ಥೆಯು ವಾಣಿಜ್ಯ ಪೈಲಟ್ ಲೈಸೆನ್ಸ್ (CPL) ಹಾಗೂ ಖಾಸಗಿ ಪೈಲಟ್ ಲೈಸೆನ್ಸ್ (PPL) ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ವೈಮಾನಿಕ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಆಸಕ್ತಿಯುಂಟು ಮಾಡುವ ಕೆಳಕಂಡ ಚಟುವಟಿಕೆಗಳನ್ನು ಸಹ ಕೈಗೊಳ್ಳಲಾಗಿದೆ.

 • Microlite, helicopter, fixed wing flying and training flying
 • Hot air balloon and Para sailing
 • Remote sensing aircraft operations
 • VIP Movement.
 • Para Motor gliding 
 1. ರಾಷ್ಟ್ರೀಯ ಸೇವಾ ಯೋಜನಾ ಕೋಶ

     ಕರ್ನಾಟಕ ಸರ್ಕಾರದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶವು ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಹುಮಹಡಿ ಕಟ್ಟಡ, ಬೆಂಗಳೂರು, ಇವರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯ ಎನ್.ಎಸ್.ಎಸ್.ಅಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರು ರಾಷ್ಟ್ರೀಯ ಸೇವಾ ಯೋಜನಾ ಕೋಶದ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಪ್ರತಿ ವಿಶ್ವವಿದ್ಯಾನಿಲಯಗಳು ಮತ್ತು ನಿರ್ದೇಶನಾಲಯಗಳಲ್ಲಿ ಒಬ್ಬರು ಕಾರ್ಯಕ್ರಮ ಸಂಯೋಜನಾಧಿಕಾರಿಗಳಿರುತ್ತಾರೆ.  ರಾಜ್ಯದಲ್ಲಿ 32 ವಿಶ್ವವಿದ್ಯಾನಿಲಯಗಳು ಮತ್ತು 04 ನಿರ್ದೇಶನಾಲಯಗಳಲ್ಲಿ ಒಟ್ಟು 36 ಕಾರ್ಯಕ್ರಮ ಸಂಯೋಜನಾಧಿಕಾರಿಗಳು ಮತ್ತು 3000 ಕಾರ್ಯಕ್ರಮ ಅಧಿಕಾರಿಗಳು ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸುವಲ್ಲಿ ನಿರತರಾಗಿದ್ದಾರೆ.  ಈ ಯೋಜನೆಯಲ್ಲಿ ಒಟ್ಟು 2,78,200 ಸ್ವಯಂ ಸೇವಕರು ದೈನಂದಿನ ಹಾಗೂ 1,39,100 ಸ್ವಯಂ ಸೇವಕರು ವಿಶೇಷ ಶಿಬಿರದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ರಾಜ್ಯದ 30 ವಿಶ್ವವಿದ್ಯಾನಿಲಯಗಳು ಹಾಗೂ 04 ನಿರ್ದೇಶನಾಲಯಗಳಲ್ಲಿ ಒಳಗೊಂಡಿದೆ.

ಇತ್ತೀಚಿನ ನವೀಕರಣ​ : 30-05-2019 11:37 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080